DAKSHINA KANNADA
ಹಿರಿಯ ಪತ್ರಕರ್ತ ಅಮ್ಮುಂಜ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!
ಹಿರಿಯ ಪತ್ರಕರ್ತ ಅಮ್ಮುಂಜ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!
ಪುತ್ತೂರು : ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48ವ.) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.
ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿಕೊಂಡು ಚಿರಪರಿಚಿತರಾಗಿದ್ದ ನಾರಾಯಣ ಅವರು ಸರಳ, ಸಜ್ಜನಿಕೆಯೊಂದಿಗೆ ಎಲ್ಲರ ಜೊತ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.
ಮರಾಠಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದರು.ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಪ್ರಚಾರ ಸಮಿತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ ಪೂರ್ಣಿಮಾ, ಪುತ್ರ ಪ್ರಜ್ವಲ್ ಅವರನ್ನು ಅಗಲಿದ್ದಾರೆ. ನಾರಾಯಣ ನಾಯ್ಕರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ಕಂಬನಿ ಮಿಡಿದಿದೆ.
DAKSHINA KANNADA
ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!
ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.
16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್ನಲ್ಲಿ ನೀಡಲಾಗುತ್ತದೆ.
ಮುಂದೆ ಓದಿ..; “ಮದುವೆ ಗೌನ್”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್ನಲ್ಲಿಅಭಿಮಾನಿಗಳು!
ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.
BANTWAL
ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:
ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
BANTWAL
ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ. ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ.
ಪವಾಡ ತೋರಿದ್ದ ಕಲ್ಲುರ್ಟಿ :
ಈಗಾಗಲೇ ತಿಳಿಸಿದಂತೆ ಈ ದೈವಸ್ಥಾನ ಹಿಂದು -ಮುಸಲ್ಮಾನ ಭಾಂದವರ ಭಾವೈಕ್ಯತೆಯ ಸಾನಿಧ್ಯ. ಕುದ್ರೆಬೆಟ್ಟುವಿನ ಒಂದು ಮುಸನ್ಮಾನ ಕುಟುಂಬ ಕಲ್ಲುರ್ಟಿ ದೈವವನ್ನು ನಂಬುತ್ತಿದ್ದರು. ಐಸಮ್ಮ ಎಂಬ ಮಹಿಳೆಯ ಕುಟುಂಬ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಿದ್ದರು. ಇದರಿಂದ ಬೇಸತ್ತ ಕುಟುಂಬಕ್ಕೆ ಆ ಜಾಗದಲ್ಲಿ ಅಗೋಚರ ಶಕ್ತಿಯೊಂದು ಇರುವುದು ತಿಳಿಯುತ್ತದೆ. ನಂತರ ಅವರು ‘ಕಲ್ಲುರ್ಟಿ’ಯನ್ನು ಕಲ್ಲಿನ ರೂಪದಲ್ಲಿ ನಂಬಲು ಆರಂಭಿಸುತ್ತಾರೆ. ಕಷ್ಟ ಎಂದು ತನ್ನಲ್ಲಿಗೆ ಬಂದವರಿಗೆ ಐಸಮ್ಮ ಕಲ್ಲುರ್ಟಿಯ ಸ್ಮರಿಸಿ ಕಪ್ಪು ದಾರ ನೀಡುತ್ತಿದ್ದರು. ಇದರಿಂದ ಅವರ ತೊಂದರೆಗಳೆಲ್ಲ ನಿವಾರಣೆಯಾಗುತ್ತಿತ್ತು ಎಂಬ ನಂಬಿಕೆಯಿದೆ.
ಮನೆಯಲ್ಲಿ ವಿಶೇಷ ಅಡುಗೆ ಮಾಡಿದರೆ, ಆಕೆ ದೈವಕ್ಕೆ ಬಡಿಸದೇ ಸೇವಿಸುತ್ತಿರಲಿಲ್ಲ. ಒಂದುವೇಳೆ ತಪ್ಪಿದ್ದಲ್ಲಿ ಅಡುಗೆ ಮಾಡಿಟ್ಟಿದ್ದ ಪಾತ್ರೆಯೇ ದೈವದ ಕಲ್ಲಿನತ್ತ ಚಲಿಸುತ್ತಿತ್ತಂತೆ. ಆದರೆ, ಕಾಲಕ್ರಮೇಣ ಆ ಕುಟುಂಬ ಮನೆಯನ್ನು ಮಾರಿ ಬೇರೆ ಕಡೆ ಹೊರಟು ಹೋಗಿದ್ದರು.
ಮತ್ತೆ ಬೆಳಕಿಗೆ ಬಂದ ಕ್ಷೇತ್ರ :
ಆ ಮುಸಲ್ಮಾನ ಕುಟುಂಬವೇನೋ ಹೊರಟು ಹೋಯಿತು. ಶಕ್ತಿ ಅಲ್ಲೇ ಉಳಿಯಿತು. ಈ ಘಟನೆ ನಡೆದು ಹಲವು ದಶಕಗಳೇ ಕಳೆದಿವೆ. 15 ವರ್ಷಗಳಿಂದ ಇಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮಣಿಕಂಠ ಯುವಶಕ್ತಿ ಕೇಂದ್ರ ಭಜನಾ ಮಂದಿರವೊಂದನ್ನು ಸ್ಥಾಪಿಸುವ ಕೆಲಸ ಆರಂಭಿಸಿತ್ತು. ಆದರೆ, ಇದಕ್ಕೆ ತಡೆ ಬರಲಾರಂಭಿಸಿದಾಗ, ಮಂದಿರದಲ್ಲಿ ಪ್ರಶ್ನೆ ಇಟ್ಟಾಗ ‘ಯುವಶಕ್ತಿ’ ಯ ಯುವಕರು ತಾಯಿ ಕಲ್ಲುರ್ಟಿಯನ್ನು ನಂಬಬೇಕು ಎಂಬ ಅಪ್ಪಣೆಯಾಯಿತು.
ನಾವು ಬಿಟ್ಟೆವೆಂದು ದೈವ ಬಿಡುವುದೇ..? ಪೂ – ನೀರ್(ಹೂ-ನೀರು) ಸಲ್ಲದೇ ಹೋದಲ್ಲಿ ಹೇಗೆ? ಅಂತೆಯೇ, ಹಳೆಯ ದೈವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದು ನಿಂತಿದೆ.
20 ದಿನಗಳಲ್ಲಿ ನಡೆಯಿತು ಜೀರ್ಣೋದ್ಧಾರ :
ದೈವದ ಅಭಯ ಯುವಕರ ಮೇಲಿತ್ತು. ಇಡೀ ಊರೇ ಅಚ್ಚರಿ ಪಡುವಂತೆ ತಾಯಿಯ ದೈವಸ್ಥಾನದ ಕಾರ್ಯ ನಡೆಯಿತು. ಕೇವಲ 20 ದಿನಗಳಲ್ಲಿ ಅಪ್ಪೆ ಕಲ್ಲುರ್ಟಿಯ ಕ್ಷೇತ್ರ ತಲೆ ಎತ್ತಿ ನಿಂತಿತು ಅಂದರೆ ನೀವು ನಂಬಲೇ ಬೇಕು. ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಹಗಲಿರುಳು ಯುವಕರು ಶ್ರಮಿಸಿದ್ದಾರೆ. ಹುಬ್ಬೇರಿಸುವಂತಹ ಕೆಲಸ ಮಾಡಿದ ಶ್ರೀ ಮಣಿಕಂಠ ಯುವಶಕ್ತಿ ತಂಡದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ಕಾರ್ಯಕ್ರಮಗಳ ವಿವರ :
ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ. ಮೇ.02 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ, ಕಲ್ಪೋಕ್ತ ಪೂಜೆ, ವಾಸ್ತು ಹೋಮಾದಿ ಅಧಿವಾಸ ನಡೆಯಲಿದೆ. ಸಂಜೆ 6.30 ರಿಂದ ‘ನಮ್ಮ ಕುಡ್ಲ’ ವಾಹಿನಿ ಖ್ಯಾತಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ನಡೆಯಲಿದೆ.
ಮೇ.03 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.
ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿಪರ್ಜನ್ಯ ಜಪ; ಶಾಸಕರು ಭಾಗಿ
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
- DAKSHINA KANNADA7 days ago
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
- FILM7 days ago
ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
- BANTWAL7 days ago
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
- bangalore7 days ago
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!