Connect with us

    LATEST NEWS

    ಹೆರಿಗೆ ವೇಳೆ ಕೈಚೆಲ್ಲಿದ ವೈದ್ಯರು, ಗರ್ಭಿಣಿ ಸಾವು: ಕುಟುಂಬಸ್ಥರಿಂದ ಆಕ್ರೋಶ

    Published

    on

    ಉಡುಪಿ: ಹೆರಿಗೆಯ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಆಘಾತದಿಂದ ರೊಚ್ಚಿಗೆದ್ದ ಕುಟುಂಬಸ್ಥರು ಹೆರಿಗೆ ಆಸ್ಪತ್ರೆಗೆ ನುಗ್ಗಲು ಪ್ರಯತ್ನಿಸಿದ್ದಾರೆ. ನಗರದ ತಾಯಿ ಮತ್ತು ಮಕ್ಕಳ ಉಚಿತ ಹೆರಿಗೆ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು ನವಜಾತ ಶಿಶು ತಾಯಿ ಇಲ್ಲದೆ ಅನಾಥವಾಗಿದೆ.


    ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟ ನಿವಾಸಿ ಉಷಾ ಚೊಚ್ಚಲ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.

    ಈಗಾಗಲೇ 11 ಸಾವಿರಕ್ಕೂ ಅಧಿಕ ಉಚಿತ ಹೆರಿಗೆಗಳನ್ನು ನಡೆಸಿರುವ ಈ ಆಸ್ಪತ್ರೆಯಲ್ಲಿ, ಸುರಕ್ಷಿತ ಹೆರಿಗೆ ಆಗುತ್ತೆ ಅನ್ನೋದು ಮನೆಯವರ ವಿಶ್ವಾಸವಾಗಿತ್ತು.

    ಸಿಸೇರಿಯನ್ ಅಗತ್ಯವಿಲ್ಲ ಸಹಜವಾಗಿಯೇ ಹೆರಿಗೆ ನಡೆಸುತ್ತೇವೆ ಎಂದು ವೈದ್ಯರು ಭರವಸೆಯನ್ನು ಕೂಡ ನೀಡಿದ್ದರು. ಆದರೆ ವೈದ್ಯರ ಭರವಸೆ ಸುಳ್ಳಾಗಿದೆ.

    ಹೆರಿಗೆಯ ಸಮಯ ಬಂದಾಗ ವೈದ್ಯರು ಕೈಕಾಲು ಬಿಟ್ಟಿದ್ದಾರೆ. ಇನ್ನು ನಮಗೆ ಚಿಕಿತ್ಸೆ ನೀಡುವುದಕ್ಕೆ ಆಗೋಲ್ಲ ಬೇರೆ ಆಸ್ಪತ್ರೆಗೆ ಕೊಂಡೊಯ್ಯಿರಿ ಎಂದು ಹೇಳಿದ್ದಾರೆ.

    ಮಣಿಪಾಲದ ಖಾಸಗಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಉಷಾ ಅಸುನೀಗಿದ್ದಾರೆ.

    ಕಳೆದ ಮೂರು ದಿನಗಳಿಂದ ಬಿಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾರ್ಮಲ್ ಹೆರಿಗೆ ಸಾಧ್ಯವಿಲ್ಲ ಎಂದಾದರೆ ಸಿಸೇರಿಯನ್ ಮಾಡಬಹುದಿತ್ತು.

    ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಷ್ಟ ಎಂದು ಮೊದಲೇ ತಿಳಿಸಿದ್ದರೆ ಮಣಿಪಾಲಕ್ಕೆ ಕೊಂಡೊಯುತ್ತಿದ್ದೆವು. ಏನನ್ನೂ ಮಾಡದೆ ಇದೀಗ ಶವ ಮನೆಗೆ ಕೊಂಡೊಯ್ಯಬೇಕಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

     

    ಬಾಣಂತಿಯ ಸಾವಿನಿಂದ ಆಕ್ರೋಶಗೊಂಡ ಸಂಬಂಧಿಕರು ಮತ್ತು ಗ್ರಾಮಸ್ಥರು ಆಸ್ಪತ್ರೆ ಆವರಣದಲ್ಲಿ ಸುದೀರ್ಘಕಾಲ ಪ್ರತಿಭಟನೆ ನಡೆಸಿದ್ದಾರೆ.

    ಕಣ್ಣೀರಿಡುತ್ತಲೇ ಆಸ್ಪತ್ರೆಗೆ ನುಗ್ಗಲು ಎತ್ತಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರನ್ನು ಕೂಡಲೆ ಸ್ಥಳಕ್ಕೆ ಕರೆಸುವಂತೆ ಒತ್ತಾಯ ಮಾಡಿದ್ದಾರೆ.

    ಅಮಾಯಕ ಜೀವವನ್ನು ಬಲಿ ತೆಗೆದುಕೊಂಡವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಕುಟುಂಬಿಕರ ಆಕ್ರೋಶದಿಂದ ಆಸ್ಪತ್ರೆ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

    ಉಡುಪಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಜಿಲ್ಲಾ ಸರ್ಜನ್ ಹಾಗೂ ಹಿರಿಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದರು.

    ಇಷ್ಟಾದರೂ ಕುಟುಂಬಿಕರು ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ್ದಾರೆ.
    ಹೆರಿಗೆಯ ವೇಳೆ ಶ್ಚಾಸಕೋಶ ದಲ್ಲಿ ನೀರು ತುಂಬಿ ಉಸಿರಾಟಕ್ಕೆ ಸಮಸ್ಯೆಯಾಗಿದೆ, ಮೂರ್ಛೆ ರೋಗದ ಲಕ್ಷಣಗಳು ಕಂಡು ಬಂದಿದ್ದು, ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ರವಾನೆ ಮಾಡಲು ಹೇಳಿದ್ದೇವೆ. ಇದೊಂದು ಆಕಸ್ಮಿಕ ಘಟನೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

    DAKSHINA KANNADA

    ನಟಿ – ಸಂಸದೆ ಕಂಗಾನಾಗೆ ಕಪಾಳ ಮೋಕ್ಷ..! CISF ಸಿಬ್ಬಂದಿ ವಿರುದ್ಧ ಆರೋಪ..!

    Published

    on

    ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ (CISF) ಮಹಿಳಾ ಸಿಬ್ಬಂದಿ ತನಗೆ ಕಪಾಳಮೋಕ್ಷ ಮಾಡಿದ್ದಾಗಿ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ನೂತನ ಸಂಸದೆ ಕಂಗನಾ ರನೌತ್ ಆರೋಪಿಸಿದ್ದಾರೆ. ದೆಹಲಿಗೆ ಆಗಮಿಸಿದ ಕಂಗನಾ ಹಿರಿಯ ಸಿಐಎಸ್‌ಎಫ್‌ (CISF) ಅಧಿಕಾರಿಗಳ ದೂರು ನೀಡಿದ್ದಾರೆ.

    ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಯಾಕೆ?

    ದೆಹಲಿಗೆ ಪ್ರಯಾಣ ಬೆಳೆಸಲು ಕಂಗನಾ ಚಂಢೀಗಢ ವಿಮಾನ ನಿಲ್ದಾಣಕ್ಕೆ ಮದ್ಯಾಹ್ನ 3.30 ರ ಸುಮಾರಿಗೆ ಆಗಮಿಸಿದ್ದರು. ಈ ವೇಳೆ ಭದ್ರತಾ ತಪಾಸಣೆ ಮಾಡುತ್ತಿದ್ದ ಮಹಿಳಾ ಸಿಐಎಸ್‌ಎಫ್‌ (CISF) ಸಿಬ್ಬಂದಿ ಜೊತೆ ಕಿರಿಕ್ ನಡೆದಿದೆ. ಸಿಐಎಸ್‌ಎಫ್‌ನ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್‌ ಅವರು ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕಂಗನಾ ಇದು ರೈತರ ಆಂದೋಲನದ ವಿರುದ್ಧ ತಾನು ಮಾತನಾಡಿದ ಕೋಪದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಬಂಧನ..!

    ದೆಹಲಿಯ ಹಿರಿಯ ಅಧಿಕಾರಿಗಳಿಗೆ ಕಂಗನಾ ದೂರು ನೀಡಿದ ಹಿನ್ನಲೆಯಲ್ಲಿ ಕುಲ್ವಿಂದರ್ ಕೌರ್ ಅವರನ್ನು ಕಮಾಂಡಿಗ್ ಆಫೀಸರ್ ಬಂಧಿಸಿದ್ದಾರೆ. ಘಟನೆಯ ಕುರಿತು ಕೌರ್ ಅವರಿಂದ ಮಾಹಿತಿ ಪಡೆಯಲಾಗಿದ್ದು, ಘಟನಾ ಸ್ಥಳದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರೀಶೀಲನೆ ನಡೆಸಿದ್ದಾರೆ. ಇದೊಂದು ಗಂಭೀರ ಆರೋಪವಾಗಿ ಪರಿಗಣಿಸಿದ ಸಿಐಎಸ್ಎಪ್‌ ಅಧಿಕಾರಿಗಳು ತನಿಖಾ ಸಮಿತಿ ರಚಿಸಿ ತನಿಖೆ ನಡೆಸುತ್ತಿದ್ದಾರೆ.

    2024 ರ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಂಗನಾ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ರನೌತ್ ಅವರು ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ನಿರ್ಣಾಯಕ ಗೆಲುವು ಸಾಧಿಸಿದ್ದಾರೆ.

    Continue Reading

    LATEST NEWS

    ಛಾಯಾಗ್ರಾಹಕನ ಮುಂದೆ ಮಂಡಿಯೂರಿ ಕುಳಿತು ರಶ್ಮಿಕಾ ಮಂದಣ್ಣ ಮಾಡಿದ್ದೇನು..!? ವೈರಲ್ ವಿಡಿಯೋ ನೋಡಿ.!

    Published

    on

    ಬಹುಭಾಷೆಗಳಲ್ಲಿ ನಟಿಸಿ ಜನಪ್ರಿಯತೆ ಹೆಚ್ಚಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ದೊಡ್ಡದಿದೆ. ವಿನಮ್ರ ಸ್ವಭಾವದಿಂದ ಗುರುತಿಸಿಕೊಂಡಿರುವ ನಟಿಯ ಹೃದಯಸ್ಪರ್ಶಿ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸಖತ್​​ ಸದ್ದು ಮಾಡುತ್ತಿದೆ. ಪಾಪರಾಜಿಯೊಬ್ಬರ ಜೊತೆ ಬಹಳ ಫ್ರೆಂಡ್ಲಿಯಾಗಿ ನಡೆದುಕೊಂಡಿರುವ ನಟಿಯ ನಡೆ ಅಭಿಮಾನಿಗಳ ಮನ ಗೆದ್ದಿದೆ. ಇತರರ ಫೊಟೋ ಕ್ಲಿಕ್ಕಿಸುವ ಕ್ಯಾಮರಾಮ್ಯಾನ್​​ನ ಫೋಟೋಗಳನ್ನು ರಶ್ಮಿಕಾ ಸೆರೆಹಿಡಿದಿದ್ದಾರೆ. ನಟಿಯ ನಗುಮಮೊಗ, ನಡೆನುಡಿ ಇಂಟರ್​​​ನೆಟ್​​ನಲ್ಲಿ ಸದ್ದು ಮಾಡಿದೆ.

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್​​ ಆಗುತ್ತಿರುವ ಈ ವಿಡಿಯೋದಲ್ಲಿ ರಶ್ಮಿಕಾ ಆಕರ್ಷಕ ಲೊಕೇಶನ್​ ಒಂದರಲ್ಲಿ ನಿಂತು ತಮ್ಮದೇ ಆಲೋಚನೆಯಲ್ಲಿ ಮುಳುಗಿದ್ದಾರೆ. ನಟಿಯ ವಿಡಿಯೋ ಕ್ಯಾಮರಾಮ್ಯಾನ್​​​​ನ ಕ್ಯಾಮರಾದಲ್ಲಿ ಸೆರೆಯಾಗಿದೆ. ನಟಿ ಆ ವ್ಯಕ್ತಿಯಿಂದ ಕ್ಯಾಮರಾ ತೆಗೆದುಕೊಂಡು ಅವರ ಫೋಟೋಗಳನ್ನು ಸೆರೆಹಿಡಿದಿದ್ದಾರೆ. ವೃತ್ತಿಪರ ಛಾಯಾಗ್ರಾಹಕಿಯಂತೆ ನಿಂತು ಫೋಟೋ ಕ್ಲಿಕ್ಕಿಸಲಾರಂಭಿಸಿದ್ದಾರೆ. ಕ್ಯಾಮರಾಮ್ಯಾನ್‌ನ ಪರ್ಫೆಕ್​​​ ಫೋಟೋಗಾಗಿ ನಟಿ ಮಂಡಿಯೂರಿ ಕುಳಿತು ಉತ್ತಮ ಶಾಟ್​ಗಳನ್ನು ಕ್ಲಿಕ್ಕಿಸಿದ್ದಾರೆ.

    ಈ ವಿಡಿಯೋದ ಲೊಕೇಶನ್​​​​ ಮಾಹಿತಿ ಸ್ಪಷ್ಟವಾಗಿರದಿದ್ದರೂ, ಸೋಷಿಯಲ್​ ಮೀಡಿಯಾ ಪೋಸ್ಟ್‌ಗಳು ಇದು ಇಟಲಿಯ ಪೋರ್ಟೋಫಿನೋ ಎಂದು ಸೂಚಿಸಿದೆ. ರಶ್ಮಿಕಾ ಅಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ ವೆಡ್ಡಿಂಗ್​​ ಕ್ರೂಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರಶ್ಮಿಕಾ ತಮ್ಮ ಸುತ್ತಲಿರುವ ಪ್ರತಿಯೊಬ್ಬರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆಂದು ಅಭಿಮಾನಿಗಳು ಪ್ರಶಂಸಿಸಿದ್ದಾರೆ.

    ಇನ್ನು ನಟಿಯ ಸಿನಿಮಾ ವಿಚಾರ ಗಮನಿಸುವುದಾದರೆ, ಕೊನೆಯ ಸಿನಿಮಾ ಅನಿಮಲ್​ 2023ರ ಡಿಸೆಂಬರ್​​ನಲ್ಲಿ ತೆರೆಕಂಡು ಸೂಪರ್​ ಡೂಪರ್ ಹಿಟ್​ ಆಗಿದೆ. ಮುಂದಿನ ಬಹುನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಇದೇ ಸಾಲಿನಲ್ಲಿ ತೆರೆಕಾಣಲಿದೆ. ಪುಷ್ಪ ರಾಜ್ ಪಾತ್ರದಲ್ಲಿ ನಟಿಸಲಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿ ಪಾತ್ರವನ್ನು ಮುಂದುವರಿಸಲಿದ್ದಾರೆ. ಇದಲ್ಲದೇ ದಿ ಗರ್ಲ್​ಫ್ರೆಂಡ್​​​, ಛಾವಾ, ರೈನ್​ಬೋ ಪ್ರಾಜೆಕ್ಟ್​ಗಳು ನಟಿ ಬಳಿ ಇದ್ದು, ಕೆಲ ದಿನಗಳ ಹಿಂದಷ್ಟೇ ಸಲ್ಮಾನ್​ ಖಾನ್​ ಜೊತೆಗೆ ಸಿಖಂದರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಾಗಿಯೂ ಘೋಷಿಸಿದ್ದಾರೆ.

    ನಟಿಯ ಪ್ರತಿಭೆ ಮಾತ್ರವಲ್ಲದೇ ಡೌನ್-ಟು-ಅರ್ಥ್ ಸ್ವಭಾವದಿಂದ ಅಭಿಮಾನಿಗಳ ಸಂಖ್ಯೆ ಪ್ರತಿದಿನ ಹೆಚ್ಚುತ್ತಲೇ ಇದೆ. ನಟಿಯ ಮುಂದಿನ ಸಿನಿಮಾಗಳಿಗಾಗಿ ಅಭಿಮಾನಿಗಳು ಸೇರಿದಂತೆ ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿರುವ ಪುಷ್ಪ: ದಿ ರೈಸ್​ ಸಿನಿಮಾದ ಮುಂದುವರಿದ ಭಾಗ ಪುಷ್ಪ: ದಿ ರೂಲ್​​​​ ಎಷ್ಟರ ಮಟ್ಟಿಗೆ ಗೆಲ್ಲಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

    Continue Reading

    LATEST NEWS

    ಸರಕಾರದ ಒಂದು ವಿಕೆಟ್ ಔಟ್..!! ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರಾ ನಾಗೇಂದ್ರ..?

    Published

    on

    ಬೆಂಗಳೂರು:  ವಾಲ್ಮೀಕಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಹೌದು, ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರರವರ ಹೆಸರು ಕೇಳಿಬಂದಿತ್ತು. ಬಹು ಕೋಟಿಯ ಹಗರಣದಲ್ಲಿ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಇಂದು ರಾಜಿನಾಮೆ ನೀಡಿದ್ದಾರೆ  ಇಂದು(ಜೂ.6) ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ರಾಜಿನಾಮೆಯನ್ನು ನೀಡಿದ್ದಾರೆ ಎಂಬ ಸುದ್ದಿ ಹರಡಿತ್ತು.

    ನಾಗೇಂದ್ರ ಅವರ ರಾಜಿನಾಮೆ ನೀಡುವ ಮೊದಲು ಡಿಸಿಎಂ ಮಾಧ್ಯಮಗಳ ಜೊತೆ ಮಾತನಾಡಿದ್ದು, ನಾಗೇಂದ್ರರವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ. ಹಾಗಾಗಿ ಅವರು ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ, ಆದರೆ ಸರಕಾರದ ಘನತೆಗೆ ಧಕ್ಕೆ ಬರಬಾರದು. ಹೀಗಾಗಿ ಸ್ವತಃ ನಾಗೇಂದ್ರವರು ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮದವರಿಗೆ ತಿಳಿಸಿದ್ದರು. ಇದಾದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿದೆ.

    ಪ್ರದೀಪ್ ಈಶ್ವರ್ ರಾಜಿನಾಮೆಗೆ ಒತ್ತಾಯ..! ಯಾರ ಕರೆಗೂ ಸಿಗುತ್ತಿಲ್ವಂತೆ ಪ್ರದೀಪ್..!

    ಇನ್ನು ಈ ಹಗರಣದಲ್ಲಿ ಸಿಬಿಐ ಎಂಟ್ರಿಯಾಗಿತ್ತು. ಇನ್ನೇನು ಬಿಜೆಪಿ ಹಾಗೂ ಜೆಡಿಎಸ್ ಒಗ್ಗೂಡಿ ಭಾರೀ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೂ ಸಜ್ಜಾಗುತ್ತಿದ್ದರು. ಇದೆಲ್ಲವೂ ಸರ್ಕಾರಕ್ಕೆ ಮುಜುಗರಕ್ಕೆ, ಸಂಕಷ್ಟಕ್ಕೆ ಒಳಗಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿಎಂ ನಿವಾಸದಲ್ಲಿ ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಈ ಪ್ರಕರಣ ಬಗ್ಗೆ ಚರ್ಚಿಸಿದ್ದರು. ಆದರೆ ಸಚಿವ ನಾಗೇಂದ್ರ ಯಾವುದೇ ರಾಜಿನಾಮೆ ನೀಡಿಲ್ಲ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending