Connect with us

    MANGALORE

    ‘ಶ್ರೀ ದೇವಿ ನವರಾತ್ರಿ ಚರಿತಾಮೃತ’ ಪರಿಷ್ಕೃತ ಆವೃತ್ತಿ ಬಿಡುಗಡೆ

    Published

    on

    ಮಂಗಳೂರು: ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ ಅವರು ಸಂಪಾದಿಸಿದ ‘ಶ್ರೀ ದೇವಿ ನವರಾತ್ರಿ ಚರಿತಾಮೃತ’ ಎಂಬ ವಿಷಯ ಕೋಶದ ಪರಿಷ್ಕೃತ ಆವೃತ್ತಿ ಇತ್ತೀಚೆಗೆ ಬಿಡುಗಡೆಗೊಂಡಿತು.

    ನಗರದ ‘ನಮ್ಮ ಕುಡ್ಲ’ ವಾಹಿನಿಯ ಬಿ.ಪಿ.ಕರ್ಕೇರ ಸಭಾಂಗಣದಲ್ಲಿ ನಡೆದ ‘ದಸರಾ ವೈಭವ’ ದ ಸಮಾರಂಭದಲ್ಲಿ ಎಕ್ಸ್‌ಪರ್ಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್‌. ನಾಯಕ್ ಅವರು ಕೃತಿ ಬಿಡುಗಡೆ ಮಾಡಿದರು.


    ‘ನಮ್ಮ ಕುಡ್ಲ ವಾಹಿನಿಯು ಈ ಕೃತಿಯನ್ನು ಪ್ರಕಾಶಿಸಿದೆ. 2019 ರಲ್ಲಿ ಪ್ರಥಮ ಮುದ್ರಣವು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದ್ದರು. ಇದೀಗ “ಮಾರಿ ಆರಾಧನೆ” ಯ ಕಿರು ಮಾಹಿತಿಯೊಂದಿಗೆ ಪರಿಷ್ಕೃತ ಎರಡನೇ ಆವೃತ್ತಿಯನ್ನು ಸಿದ್ದಗೊಳಿಸಲಾಗಿದೆ.

    ನವದುರ್ಗೆಯರು, ಶ್ರೀ ದೇವಿ ಸ್ವರೂಪಗಳು, ಶಕ್ತಿ ಪೀಠಗಳು, ನವರಾತ್ರಿ, ದಸರಾ ಬಗ್ಗೆ ಸಂಕ್ಷಿಪ್ತ ಮಾಹಿತಿಗಳನ್ನು ವಿವಿಧ ಮೂಲಗಳಿಂದ ಆಯ್ದು ಈ ಪುಸ್ತಕದಲ್ಲಿ ನೀಡಲಾಗಿದೆ ಎಂದು ಲೇಖಕ ಕದ್ರಿ ನವನೀತ ಶೆಟ್ಟಿ ಅವರು ಮಾಹಿತಿ ನೀಡಿದರು.

    ಈ ವೇಳೆ ಎ.ಜೆ.ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ, ಶಾರದಾ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರು, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್,

    ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರಾದ ಸುರೇಶ್ ಬಿ ಕರ್ಕೇರ ಹಾಗೂ ಲೀಲಾಕ್ಷ ಬಿ ಕರ್ಕೇರಾ ಉಪಸ್ಥಿತರಿದ್ದರು. ದುಬೈನಿಂದ ಅನಿವಾಸಿ ಭಾರತೀಯ ಸತೀಶ್ ಪೂಜಾರಿ, ಜಪಾನ್‌ನಿಂದ ಶ್ರೀಕಲಾ ಬೊಳ್ಳಾಜೆ ಹಾಜರಿದ್ದರು.

    LATEST NEWS

    ನೇಪಾಳ ಮೂಲದ ಅಪ್ರಾಪ್ತೆ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಜೂ.8ರಂದು ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ನೇಪಾಳ ಮೂಲದ 16ರ ಹರೆಯದ ರಬೀನ ಬಿ.ಕೆ ಎಂದು ಗುರುತಿಸಲಾಗಿದೆ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.

    ಮುಂದೆ ಓದಿ..;  ಬಿಜೆಪಿ ಗೆಲುವಿಗಾಗಿ ಕಾಳಿ ದೇವಿಗೆ ಕೈ ಬೆರಳನ್ನೇ ಅರ್ಪಣೆ ಮಾಡಿದ ಕಾರ್ಯಕರ್ತ..!!

    ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ  ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು,  ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ನಿನ್ನೆ  ಮದ್ಯಾಹ್ನ ರಬೀನಳ ತಾಯಿ‌ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹ*ತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣಾ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

    Continue Reading

    LATEST NEWS

    ಪ್ರಧಾನಿಯಾಗಿ ‘ಮೋದಿ’ ಪ್ರಮಾಣವಚನಕ್ಕೆ ಕ್ಷಣಗಣನೆ; ಉಡುಪಿ ಪೇಜಾವರ ಶ್ರೀ ಗಳಿಗೂ ಆಹ್ವಾನ

    Published

    on

    ದೆಹಲಿ: ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ರಾಷ್ಟ್ರಪತಿ ಭವನದಲ್ಲಿ ಅದ್ಧೂರಿಯಾಗಿ ನೆರವೇರಲಿರುವ ಪದಗ್ರಹಣ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸಂಜೆ 7.15 ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶ-ವಿದೇಶದಲ್ಲೂ ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಪ್ರಮಾಣ ವಚನ ಭೋಧಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ಉಡುಪಿ ಮಠದ ಪೇಜಾವರ ಶ್ರೀಗಳಿಗೆ ಪ್ರಧಾನಿ ಕಛೇರಿಯಿಂದ ಆಹ್ವಾನ ನೀಡಲಾಗಿದೆ. ನಿನ್ನೆ(ಜೂ.08) ಸಂಜೆ ಪಿಎಂಒ ನಿಂದ ಉಡುಪಿ ಪೇಜಾವರ ಸ್ವಾಮೀಜಿಗಳಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕರೆ ಬಂದಿದ್ದು, ಸ್ವಾಮಿಗಳು ಬೆಳಿಗ್ಗೆ 11.30ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.

    ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಆಹ್ವಾನ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​ನಿಂದ ದೆಹಲಿಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆರಳಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಮುಂದೆ ಓದಿ..; 18 ನೇ ಲೋಕಸಭೆಗೆ ಕ್ಷಣಗಣನೆ..! ಮೋದಿ ಮತ್ತೆ ಪ್ರಧಾನಿ ಆಗ್ತಾರ..?

    ಡಾ.ನಸೀರ್ ಅಹ್ಮದ್​ಗೂ ಆಹ್ವಾನ

    ದಾವಣಗೆರೆಯ ಸಮಾಜ ಸೇವಕ ಮತ್ತು ಬಿಜೆಪಿ ಮುಖಂಡ ಡಾ.ನಸೀರ್ ಅಹ್ಮದ್​ ಅವರಿಗೂ ಪ್ರಧಾನ ಮಂತ್ರಿಗಳ ಕಛೇರಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯ, ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಅಧಿಕೃತ ಆಹ್ವಾನ ನೀಡಲಾಗಿದೆ. ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾಗಿರುವ ಡಾ.ನಸೀರ್ ಬೆಳಗ್ಗೆ ಹುಬ್ಬಳ್ಳಿ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

    ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಖರ್ಗೆಗೆ ಆಹ್ವಾನ

    ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ ಖರ್ಗೆ ಕಾರ್ಯಕ್ರಮಕ್ಕೆ ತೆರಳುವುದೋ ಬೇಡವೋ..ಅನ್ನೋದನ್ನು ಇನ್ನು ಖಚಿತ ಪಡಿಸಿಲ್ಲ ಎಂದು ಹೇಳಲಾಗಿದೆ.

    Continue Reading

    DAKSHINA KANNADA

    ಪಾಕಿಸ್ತಾನದ ಜೊತೆ ಭಾರತ ಕ್ರಿಕೆಟ್ ಆಡಬಾರದು ಎಂದ ಖಾದರ್..!!

    Published

    on

    ಮಂಗಳೂರು: ಪಾಕಿಸ್ತಾನದ ಜೊತೆ ನಾವು ಕ್ರಿಕೆಟ್ ಆಟ ಆಡಲೇಬಾರದು ಎಂದು ಕರ್ನಾಟಕ ವಿಧಾನಸಭೆ ಸ್ಪೀಕ‌ರ್ ಯು.ಟಿ ಖಾದರ್ ಹೇಳಿದ್ದಾರೆ.

    ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯು.ಟಿ ಖಾದರ್ ನಾನು ಕೂಡಾ ಕ್ರಿಕೆಟ್ ಆಟಗಾರ ಮತ್ತು ಕ್ರಿಕೆಟ್ ಅಭಿಮಾನಿ. ಅದಕ್ಕಿಂತ ಮಿಗಿಲಾಗಿ ನಾನು ಭಾರತ ದೇಶದ ಪ್ರಜೆ ಎಂದಿದ್ದಾರೆ. ಜೂ.9ರಂದು ಭಾರತ ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್ ಹೈವೋಲ್ವೇಜ್ ಪಂದ್ಯ ನಡೆಯಲಿದೆ. ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಲೇಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನಾವು ನೋಡಿದ್ದೇವೆ. ಭಾರತ ದೇಶದಲ್ಲಿ ಅವರ ಜತೆ ಪಂದ್ಯ ನಿಷೇಧ ಮಾಡಲಾಗಿದೆ. ಹಾಗಿರುವಾಗ ಹೊರದೇಶದಲ್ಲಿ ಅವರ ಜೊತೆ ಯಾಕೆ ಕ್ರಿಕೆಟ್ ಆಟ ಆಡಿಸಬೇಕು ಎಂದು ಪ್ರಶ್ನಿಸಿದ್ದಾರೆ. ಅವರು ಸರಿಯಾಗುವ ತನಕ ಅವರ ಜತೆ ಕ್ರಿಕೆಟ್ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅನಿಸಿಕೆ ಎಂದ ಖಾದರ್ ಹೇಳಿದ್ದಾರೆ. ನಾಳೆ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ತಂಡವನ್ನು ಹೀನಾಯವಾಗಿ ಸೋಲಿಸಬೇಕು ಎಂದು ಹೇಳಿದರು.

    Continue Reading

    LATEST NEWS

    Trending