Connect with us

DAKSHINA KANNADA

ಸೇನೆಗೆ ಗುತ್ತಿಗೆ ಆಧಾರದಲ್ಲಿ ನೇಮಕ: ಅಗ್ನಿಪಥ್ ಯೋಜನೆಗೆ DYFI ವಿರೋಧ

Published

on

ಮಂಗಳೂರು: ಭಾರತೀಯ ಸೇನೆಗೆ ಹೊಸ ಬ್ಯಾಚ್ ಸೈನಿಕರನ್ನು ಆಯ್ಕೆ ಮಾಡಲು ನೇಮಕಾತಿ ಅಭಿಯಾನವನ್ನು ನಡೆಸಿ ಈಗಾಗಲೇ ಎರಡು ವರ್ಷಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಆದರೆ ರಕ್ಷಣಾ ಸಚಿವಾಲಯದ ಮಾಹಿತಿಯಂತೆ ಸೇನೆಯಿಂದ ನಿವೃತ್ತರಾಗುವ ಸೈನಿಕರ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.


ಅಗ್ನಿಪಥ್ ಯೋಜನೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು ‘ಈ ಸಂದರ್ಭದಲ್ಲಿ ನರೇಂದ್ರ ಮೋದಿ ಸರ್ಕಾರವು ವೃತ್ತಿಪರ ಸೈನ್ಯವನ್ನು ಬೆಳೆಸುವ ಬದಲು, ಪಿಂಚಣಿ ಹಣವನ್ನು ಉಳಿಸಲು ‘ಒಪ್ಪಂದದ ಮೇಲೆ ಸೈನಿಕರನ್ನು ನೇಮಕ’ ಪ್ರಸ್ತಾಪಿಸುವ ಈ ರಾಷ್ಟ್ರವಿರೋಧಿ ಯೋಜನೆಯನ್ನು ಕೂಡಲೇ ಕೈಬಿಡಲು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸುತ್ತದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ‘ಅಗ್ನಿಪಥ್’ ಯೋಜನೆಯನ್ನು ಘೋಷಿಸಿದರು. ಅದರ ಮೂಲಕ ಸಶಸ್ತ್ರ ಪಡೆಗಳಿಗೆ ಯುವಕರನ್ನು ನೇಮಿಸಿಕೊಳ್ಳಲಾಗುವುದು. ಆದರೆ ಈ ಕ್ರಮದಿಂದ ದೇಶದ ಯುವಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ನೈಜ ಪರಿಹಾರ ಸಿಗಲು ಸಾಧ್ಯವೇ ಇಲ್ಲವೆಂಬುದನ್ನು ಈ ಯೋಜನೆಯೆ ಸಾರುತ್ತಿದೆ.

ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿಯನ್ನು ಸರ್ಕಾರವು ಮಿಷನ್ ಮೋಡ್‌ನಲ್ಲಿ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೊನ್ನೆ ತಾನೆ ಘೋಷಿಣೆ ಮಾಡಿದ್ದಾರೆ.

ಆದರೆ ಈ ಹಿಂದೆ ನರೇಂದ್ರ ಮೋದಿಯವರು ನೀಡಿದ ಭರವಸೆಗಳ ಅನುಭವದಲ್ಲಿ ಈ ಘೋಷಣೆಯನ್ನು ನೋಡಿದರೆ, ಇದು ಈಗಾಗಲೇ ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನರನ್ನು ಅಣಕಿಸುವ ಹೇಳಿಕೆಯಂತೆ ಕಾಣುತ್ತದೆಯೇ ವಿನಃ, ದೇಶದ ನಿರುದ್ಯೋಗಿ ಯುವಜನರ ಮೇಲಿನ ನೈಜ ಕಾಳಜಿಯ ಹಾಗೂ ಕಾರ್ಯಗತವಾಗುವ ಯೋಜನೆಯಾಗಿಯಂತೂ ಅಲ್ಲ.

ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವವನ್ನು ರಕ್ಷಿಸುವ ಪ್ರತಿಷ್ಠಿತ ಸಂಸ್ಥೆಯಾಗಿರುವುದರ ಜೊತೆಗೆ, ಪ್ರತಿ ವರ್ಷ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಒದಗಿಸುವ ಮಾಧ್ಯಮವಾಗಿದೆ.

ಕಳೆದ ವರ್ಷಗಳಲ್ಲಿ ನೇಮಕಾತಿಯನ್ನು ಸಂಘಟಿಸುವಲ್ಲಿನ ವಿಫಲತೆಯು ಭಾರತೀಯ ಸೇನೆಯ ಕಾರ್ಯಾಚರಣೆಗಳಿಗೆ ಅಪಾಯವನ್ನುಂಟು ಮಾಡಿದೆ.

ಮಾತ್ರವಲ್ಲದೆ ವರ್ಷಗಟ್ಟಲೇ ಉದ್ಯೋಗದ ಹುಡುಕಾಟ ಹಾಗೂ ಸೇನೆ ಸೇರುವ ತಯಾರಿ ನಡೆಸುತ್ತಿದ್ದ ಈ ವಿದ್ಯಾರ್ಥಿಗಳು ಮತ್ತು ಯುವ ಅಭ್ಯರ್ಥಿಗಳಿಗೆ ಬಹಳ ಅನ್ಯಾಯವಾಗಿದೆ.

ಈಗ ಅಗ್ನಿಪಥ್ ಯೋಜನೆಯ ಘೋಷಣೆಯ ಮೂಲಕ ಸಶಸ್ತ್ರ ಪಡೆಗಳಲ್ಲಿ ಗುತ್ತಿಗೆ ಉದ್ಯೋಗಗಳನ್ನು ಪರಿಚಯಿಸಲು ಸಂಪುಟವು ಆಸಕ್ತಿ ತೋರುತ್ತಿದೆ. ಅಗ್ನಿವೀರ್‌ಗಳನ್ನು 4 ವರ್ಷಗಳ ಅವಧಿಗೆ ಮಾತ್ರ ಆಯಾ ಸೇವಾ ಕಾಯಿದೆಗಳ ಅಡಿಯಲ್ಲಿ ನೋಂದಾಯಿಸಲಾಗುತ್ತದೆ.

ನೇಮಕಗೊಂಡವರಿಗೆ ಒಂದು ಬಾರಿ ‘ಸೇವಾನಿಧಿ’ ಪ್ಯಾಕೇಜ್ ಅನ್ನು ಪಾವತಿಸಲಾಗುತ್ತಾದರೂ, ಅದು ಅವರಿಂದ ತಡೆಹಿಡಿಯಲಾಗುವ ಸಂಬಳದ ಒಂದು ಭಾಗವನ್ನು ಮತ್ತು ಸರ್ಕಾರದಿಂದ ಕೊಡುಗೆಯಾಗಿ ನೀಡುವ ಭಾಗವನ್ನು ಕೂಡ ಒಳಗೊಂಡಿರುತ್ತದೆ. ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಗೆ ಯಾವುದೇ ಅರ್ಹತೆ ಇರುವುದಿಲ್ಲ ಎಂಬುದನ್ನು ಗಮನಿಸಬೇಕು.

ಯಾವುದೇ ಕ್ಷೇತ್ರದಲ್ಲಿ ಉದ್ಯೋಗಿಗಳ ಗುತ್ತಿಗೆ ಪದ್ಧತಿಯು ಕಾರ್ಮಿಕರಿಗೆ ಖಾತರಿಪಡಿಸಬೇಕಾದ ಹಕ್ಕುಗಳಿಗೆ ಬೆದರಿಕೆಯಾಗಿ ನೋಡುವ ಸ್ಥಿತಿಯಾಗಿದೆ.

ಸಶಸ್ತ್ರ ಪಡೆಗಳ ವಿಷಯದಲ್ಲಿ ವರ್ಷಗಳ ತರಬೇತಿ ಮತ್ತು ಬಲವಾದ ಇಚ್ಛಾಶಕ್ತಿಯನ್ನು ಬೇಡುವ ಕೆಲಸವು ಗುತ್ತಿಗೆಯಾಧಾರದಲ್ಲಿ ನೇಮಕಾತಿ ನಡೆದರೆ ಪಡೆಗಳ ಗುಣಮಟ್ಟ ಕುಸಿಯಲು ಕಾರಣವಾಗುತ್ತದೆ.

ಅದರೊಂದಿಗೆ ನೇಮಕಗೊಂಡವರ ಹಕ್ಕುಗಳೂ ಪ್ರಶ್ನಾರ್ಥಕ ಚಿಹ್ನೆಯಾಗಿರುತ್ತವೆ.
ದೇಶದ ಯುವಜನರ ಕಲ್ಯಾಣ ಮತ್ತು ರಾಷ್ಟ್ರದ ಸಾರ್ವಭೌಮತ್ವದ ಹಿತದೃಷ್ಟಿಯಿಂದ ಒಕ್ಕೂಟ ಸರಕಾರವು ಅಗ್ನಿಪಥ್ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು.

ಸಶಸ್ತ್ರ ಪಡೆಗಳ ಘನತೆಯನ್ನು ಖಾತ್ರಿಪಡಿಸುವಂತೆ ನೇಮಕಾತಿಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಒತ್ತಾಯಿಸುತ್ತದೆ. ಹಾಗೂ ರಾಷ್ಟ್ರದ ಸಾರ್ವಭೌಮತ್ವಕ್ಕೆ ಸವಾಲಾಗುವ ಈ ಯೋಜನೆಯನ್ನು ಪ್ರತಿರೋಧಿಸಲು ದೇಶದ ಯುವಜನರು ಮುಂದಾಗಬೇಕೆಂದು ಕರೆ ನೀಡುತ್ತದೆ ಎಂದು ಹೇಳಿದರು.

 

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending