Connect with us

    BELTHANGADY

    ಬೆಳ್ತಂಗಡಿ: JCI ಮಂಜುಶ್ರೀ 5 ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆ

    Published

    on

    ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.

    ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್(ZTWS) ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್ ಕೆ. ಎನ್ , ಹೇಮಾವತಿ,ಸದಸ್ಯೆ ಸುಭಾಷಿಣಿ ಇವರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.


    ವಲಯಾಧ್ಯಕ್ಷ ರೋಯನ್ ಕ್ರಾಸ್ತ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಪ್ರಸಾದ್ ಬಿ.ಎಸ್,ವಲಯ ಉಪಾಧ್ಯಕ್ಷ ಪ್ರಶಾಂತ್ ಲಾಯಿಲ, ವಲಯಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್,ಸ್ವರೂಪ್ ಶೇಖರ್ ಅಭಿನಂದಿಸಿ ಗೌರವಿಸಿದರು.

    BELTHANGADY

    ಶಾಸಕನ ಬಂಧನಕ್ಕೆ ಮುಂದಾದ ಪೊಲೀಸರು…! ಎಚ್ಚರಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ…!

    Published

    on

    ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ಇಂದು ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದಾರೆ.

    ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ ಹರೀಶ್ ಪೂಂಜ ಪ್ರತಿಭಟನೆ ನಡೆಸಿದ್ದರು. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿಸಿದ್ದು ಮಾತ್ರವಲ್ಲದೆ ಸಭೆಯಲ್ಲಿ ಅವರು ಮಾಡಿದ ಭಾಷಣದ ವಿಚಾರವಾಗಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

    ಪೊಲೀಸ್ ಅಧಿಕಾರಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಪ್ರಯೋಗಿಸಿದ್ದು, ಮತ್ತು ಡಿಜೆ ಹಳ್ಳಿ ಕೆ.ಜಿ ಹಳ್ಳಿ ಮಾದರಿಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶಾಸಕರು ಹೇಳಿದ್ದರು. ಇದೀಗ ಪೊಲೀಸರು ಶಾಸಕ ಹರೀಶ್ ಪೂಂಜಾ ಮನೆಗೆ ಆಗಮಿಸಿ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ ಈ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ತೀವೃವಾಗಿ ಖಂಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಇದು ಕಾಂಗ್ರೆಸ್ ಸರ್ಕಾರದ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ಮೋರ್ಚಾದ ಅಧ್ಯಕ್ಷನ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದನ್ನು ಕೇಳಲು ಶಾಸಕರು ಹೋಗಿದ್ದಾರೆ. ಅವರ ಬಿಡುಗಡೆಗೆ ಪ್ರತಿಭಟನೆ ಮಾಡಿದ್ದಾರೆ. ಇದನ್ನು ನೀತಿ ಸಂಹಿತೆಯ ಕಾರಣ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ದೊಡ್ಡ ವಿಚಾರ ಮಾಡಿದ್ದಾರೆ. ನಮ್ಮ ಶಾಸಕನನ್ನು ಬಂಧಿಸಿದರೆ ಉಗ್ರ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನು ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಮುಂದಾದ ವಿಚಾರದ ಸುದ್ದಿ ತಿಳಿದು ಪೂಂಜಾ ಪರ ವಕೀಲರು ಹಾಗೂ ಬೆಂಬಲಿಗರು ಆಗಮಿಸಿದ್ದಾರೆ. ಶಾಸಕರ ಬಂಧನಕ್ಕೆ ಅವಕಾಶ ನೀಡದಂತೆ ಕಾರ್ಯಕರ್ತರು ತಮ್ಮ ವಾಹನಗಳನ್ನು ದಾರಿಗೆ ಅಡ್ಡವಾಗಿಟ್ಟಿದ್ದಾರೆ. ಈ ವಿಚಾರವಾಗಿ ಮಾತನಾಡಿದ ವಕೀಲರು ಪೊಲೀಸರು ನಿಯಮ ಬಾಹಿರವಾಗಿ ಶಾಸಕರನ್ನು ಬಂಧಿಸಲು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗಿ ಅಂತ ನೊಟೀಸು ಕೂಡ ನೀಡದೆ ನೇರವಾಗಿ ಮನೆಗೆ ಬಂದಿದ್ದಾರೆ. ಇದು ತಪ್ಪು ಎಂದು ಹೇಳಿದ್ದಾರೆ. ಡಿಎಸ್‌ಪಿಯವರು ನಿಮ್ಮನ್ನು ಬಂಧಿಸಲು ಬಂದಿದ್ದಲ್ಲ ವಿಚಾರಣೆಗೆ ಬನ್ನಿ ಎಂದು ಕರೆಯಲು ಬಂದಿದ್ದು ಎಂದಿದ್ದಾರೆ. ಆದರೆ ಈ ರೀತಿಯಾಗಿ ಕರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

    Continue Reading

    BELTHANGADY

    ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಎಫ್‌ಐಆರ್

    Published

    on

    ಬೆಳ್ತಂಗಡಿ: ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

    ಕಲ್ಲಿನ ಆಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧ ಎದುರು ಸೋಮವಾರ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಇಲಾಖೆಯಿಂದ ಯಾವೂದೇ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಲಾಗಿತ್ತು.

    ಈ ಸಂದರ್ಭ ಶಾಸಕ ಹರೀಶ್ ಪೂಂಜ ಹಾಗೂ ಇತರರು ಜನರನ್ನು ಗುಂಪು ಸೇರಿಸಿ ಪ್ರತಿಭಟನಾ ಸಭೆ ನಡೆಸಿರುವ ಬಗ್ಗೆ ಹಾಗೂ ಈ ಪ್ರತಿಭಟನಾ ಸಭೆಯಲ್ಲಿ ಹರೀಶ್ ಪೂಂಜ ಅವರು ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ಧ ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗಳಿಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಸಾರ್ವಜನಿಕ ನೌಕರರಾದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾರೆ.

    ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 58/2024 ಕಲಂ 143, 147, 34 , 504, 506, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

    Continue Reading

    BELTHANGADY

    ಬಸ್ ನಿಲ್ದಾಣಕ್ಕೆ ಬಂಗೇರ ಹೆಸರು ; ನುಡಿನಮನದಲ್ಲಿ ಸಿಎಂ ಘೋಷಣೆ..!

    Published

    on

    ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

    ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದರು.

    ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ, ರಾಜಕಾರಣ ಅತ್ಯಂತ ಬಡವಾಗಿದೆ. ಬಂಗೇರ ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

    ಬೆಳ್ತಂಗಡಿ  ಬಸ್‌ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

    ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

    Continue Reading

    LATEST NEWS

    Trending