Connect with us

    BANTWAL

    ವಿಟ್ಲ: ಜಾಗದ ವಿವಾದ-ಕುಡಿದ ಮತ್ತಲ್ಲಿ ತಮ್ಮನಿಂದಲೇ ಅಣ್ಣನ ಹತ್ಯೆ..!

    Published

    on

    ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ.

    ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ.


    ಪದ್ಮನಾಭ (49) ಕೊಲೆ ಆರೋಪಿ.

    ಜಾಗದ ವಿಚಾರವಾಗಿ ಮನೆಯಲ್ಲಿ ಸಹೋದರರು ಕುಡಿದು ಆಗಿಂದಾಗ ಗಲಾಟೆ ಸಂಭವಿಸುತ್ತಿತ್ತು.
    ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಮಂಗಳವಾರ ರಾತ್ರಿಯೂ ಕೂಡಾ ಜೋರಾಗಿ ಕಲಹ ನಡೆದಿದೆ ಎನ್ನುವ ಮಾಹಿತಿ ಲಭಿಸಿದೆ.
    ಈ ಘಟನೆ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ.

    BANTWAL

    ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

    Published

    on

    ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
    ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

    ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

     

    ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

    ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

    ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
    ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

    Published

    on

    ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

    ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

    ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
    ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    BANTWAL

    ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

    Published

    on

    ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

    ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


    ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending