Connect with us

    LATEST NEWS

    ಉಡುಪಿ: ಕೆಮ್ಮಣ್ಣು ಅಪಾಯಕಾರಿ ತೂಗು ಸೇತುವೆಗೆ ಬೇಕಿದೆ ದುರಸ್ತಿ ಕಾರ್ಯ

    Published

    on

    ಉಡುಪಿ: ಉಡುಪಿ ಜಿಲ್ಲೆಯ ಕೆಮ್ಮಣ್ಣು- ತೋನ್ಸೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ತೂಗುಸೇತುವೆ ಸಂಪೂರ್ಣವಾಗಿ ಅಪಾಯದಂಚಿನಲ್ಲಿದ್ದು ಜನಸಾಮಾನ್ಯರು ಅಪಾಯವನ್ನು ಎದುರಿಸುತ್ತಿದ್ದಾರೆ.

    ಈ ತೂಗು ಸೇತುವೆಯನ್ನು ತಿಮ್ಮಣ್ಣ ಕುದ್ರು ಭಾಗದ ಜನರ ಅನುಕೂಲಕ್ಕಾಗಿ 80 ರ ದಶಕದಲ್ಲಿ ನಿರ್ಮಿಸಲಾಗಿತ್ತು.


    ವರ್ಷಗಳ ಹಿಂದೆ ತಿಮ್ಮಣ್ಣ ಕುದ್ರುವಿಗೆ ಶಾಶ್ವತ ಸೇತುವೆ ನಿರ್ಮಾಣ ಆಗಿರುವುದರಿಂದ ತೂಗುಸೇತುವೆಯನ್ನು ಸದ್ಯ ಸ್ಥಳೀಯರು ಬಳಸುತ್ತಿಲ್ಲ. ಆದರೆ ಪ್ರಸ್ತುತ ಅದು ಪ್ರವಾಸಿಗರ ಆಕರ್ಷಣೆಯ ಭಾಗವಾಗಿ ಉಳಿದುಕೊಂಡಿದೆ.


    ವಾರಾಂತ್ಯ ದಿನಗಳಲ್ಲಿ ಈ ಸೇತುವೆಯನ್ನು ನೋಡಲು, ವಿಹರಿಸಲು, ಮೋಜಿಗಾಗಿ ಸಾಕಷ್ಟು ಮಂದಿ ಪ್ರವಾಸಿಗರು ಬರುತ್ತಾರೆ.


    ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇತುವೆ ಮೇಲೆ ಸೇರಿಕೊಂಡು ಮೋಜು ಮಾಡಿ ಅಪಾಯವನ್ನು ತಾವೇ ಆಹ್ವಾನಿಸುತ್ತಿದ್ದಾರೆ.

    ಈ ಸೇತುವೆಯು ಕೆಲವು ಭಾಗದಲ್ಲಿ ಶಿಥಿಲಗೊಂಡಿರುವುದು ಕಂಡು ಬಂದಿದೆ.
    ತಡೆಗೋಡೆಯ ಸರಳುಗಳು ಅಲ್ಲಲ್ಲಿ ತುಂಡಾಗಿವೆ. ತೂಗುಸೇತುವೆಯ ನಿರ್ವಹಣೆಯೂ ನಡೆಯುತ್ತಿಲ್ಲ.

    ಆದಷ್ಟು ಬೇಗ ಸರಿಪಡಿಸಿ ಸಂಭಾವ್ಯ ದುರಂತವನ್ನು ತಪ್ಪಿಸಬೇಕೆಂಬ ಆಗ್ರಹ ಸ್ಥಳೀಯರದ್ದು.

     

    LATEST NEWS

    ಪೆನ್ ಡ್ರೈವ್ ಕೇಸ್: ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ! ಪ್ರಕರಣದ ಬಗ್ಗೆ ಹೇಳಿದ್ದೇನು?

    Published

    on

    ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವೀಡಿಯೋಗಳು ದೇಶಾದ್ಯಂತ ಸಂಚಲನಮೂಡಿಸಿದ್ದು, ಪ್ರಜ್ವಲ್ ರೇವಣ್ಣ ಮಾತ್ರ ವಿದೇಶ ಸೇರಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಪ್ರಜ್ವಲ್ ರೇವಣ್ಣ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ, ಈಗ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

    ಇದೀಗ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ತಂದೆ- ತಾಯಿ, ತಾತನ ಕ್ಷಮೆಯಾಚಿಸಿರುವ ಅವರು, ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಅಲ್ಲದೇ, ತಾನು ತಲೆಮರೆಸಿಕೊಂಡಿರುವ ಬಗ್ಗೆ ಪ್ರತಿಕ್ರಿಇಸಿರೋ ಅವರು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

    ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದಿದ್ದಾರೆ.

    ಪ್ರಜ್ವಲ್ ಹೇಳಿದ್ದೇನು?

    ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡೇ ವೀಡಿಯೋ ಮಾಡಿ ತಮ್ಮ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ.
    ನಾನು ಮೇ 31 ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರೇವಣ್ಣ; ಕೇಸ್ ಬಗ್ಗೆ ಏನಂದ್ರು?

    ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

    Continue Reading

    DAKSHINA KANNADA

    ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ

    Published

    on

    ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಹರೇಕಳ-ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ.

    ಹರೇಕಳ-ಅಡ್ಯಾರ್ ಸಂಪರ್ಕಿಸುವ ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ. ಅಡ್ಯಾರ್ ಕಡೆಯಿಂದ ಹರೇಕಳ ಕಡೆಗೆ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಅಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋಟ್ಸ್ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

    ಕಾರಿನಲ್ಲಿದ್ದ ಮಹಿಳೆ, ಸಹಪ್ರಯಾಣಿಕೆ ಹಾಗೂ ಇನ್ನೊಂದು ಕಾರಿನಲ್ಲಿದ್ದ ಚಾಲಕ ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಸೌದಿ ಅರೇಬಿಯಾದ ದಮಾಮ್‌ನಲ್ಲಿ ಅ*ಗ್ನಿ ದುರಂತ; ಮೂಡುಬಿದಿರೆಯ ಮಗು ಸಾ*ವು

    Published

    on

    ಮೂಡುಬಿದಿರೆ : ಸೌದಿ ಅರೇಬಿಯಾದ ದಮಾಮ್‌ನಲ್ಲಿ ಶನಿವಾರ(ಮೇ 25) ನಡೆದ ಅ*ಗ್ನಿ ಅವಘಡದಲ್ಲಿ ಕರಾವಳಿ ಮೂಲದ ಮಗುವೊಂದು ಇಹಲೋಕ ತ್ಯಜಿಸಿದೆ. ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಮೂರು ವರ್ಷದ ಮಗುವೊಂದರ ಜೀವಾಂತ್ಯವಾಗಿದ್ದರೆ, ಮೂವರು ತೀವ್ರ ಅಸ್ವಸ್ಥರಾಗಿದ್ದಾರೆ.

    ದಮಾಮ್‌ನ ಅದಮಾ ಎಂಬಲ್ಲಿಯ ಲುಲು ಮಾಲ್‌ ಹಿಂಭಾಗದಲ್ಲಿರುವ ಅಲ್‌ ಹುಸೇನಿ ಕಂಪೌಂಡ್‌ನ‌ಲ್ಲಿ ಮೂಡುಬಿದಿರೆಯ ಕೋಟೆಬಾಗಿಲು ಖೀಲಾ ಸುನ್ನಿ ಜಾಮಿಯಾ ಮಸೀದಿ ಎದುರಿನ ಮನೆಯ ಶೇಖ್‌ ಫಹಾದ್‌ ಮತ್ತು ಅವರ ಕುಟುಂಬ ವಾಸವಾಗಿದೆ. ಇವರು ರಾತ್ರಿ ಮಲಗಿದ್ದ ವೇಳೆ ಅ*ಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಫಹದ್‌ ಅವರ ಮಗು ಸಾಯಿಕ್‌ ಶೇಖ್‌ (2) ಉಸಿರುಗಟ್ಟಿ ಮೃ*ತಪಟ್ಟಿದೆ.

    ಇದನ್ನೂ ಓದಿ : WATCH : ಚಲಿಸುತ್ತಿದ್ದ ಟ್ರಕ್ ನಲ್ಲಿ ಕಳ್ಳರ ಕರಾಮತ್ತು; ಸಿನಿಮೀಯ ರೀತಿಯಲ್ಲಿ ಸರಕು ಕದ್ದ ಖದೀಮರು! ನಿಬ್ಬೆರಗಾದ ನೆಟ್ಟಿಗರು!

    ಫಹದ್‌, ಅವರ ಪತ್ನಿ ಸಲ್ಮಾ ಕಾಝಿ ಮತ್ತು ಪುತ್ರ ಶಾಹಿದ್‌ ಶೇಖ್‌(6) ಹೊಗೆಯಿಂದ ಉಸಿರುಗಟ್ಟಿ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮನೆಯೊಳಗಿದ್ದ ರೆಫ್ರಿಜರೇಟರ್‌ನಿಂದ ಶನಿವಾರ ರಾತ್ರಿ ಅನಿಲ ಸೋರಿಕೆ ಉಂಟಾಗಿ ಈ ದುರಂ*ತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಫಹಾದ್‌ ಕುಟುಂಬವು ಕಳೆದ ಆರು ತಿಂಗಳಿನಿಂದ ಈ ಕಟ್ಟಡದಲ್ಲಿ ವಾಸವಾಗಿದೆ.

    Continue Reading

    LATEST NEWS

    Trending