Connect with us

LATEST NEWS

ಹೈದರಾಬಾದ್‌: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ, 6 ಮಂದಿ ಸಜೀವ ದಹನ..!

Published

on

ಬಹು ಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ನಾಲ್ವರು ಯುವತಿಯರು ಸೇರಿದಂತೆ 6 ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ತೆಲಂಗಾಣದ ಸೆಕುಂದರಾಬಾದ್‌ ನಲ್ಲಿ ನಡೆದಿದೆ.

ಹೈದ್ರಾಬಾದ್ : ಬಹು ಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ನಾಲ್ವರು ಯುವತಿಯರು ಸೇರಿದಂತೆ 6 ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ತೆಲಂಗಾಣದ ಸೆಕುಂದರಾಬಾದ್‌ ನಲ್ಲಿ ನಡೆದಿದೆ. 

ಸಂಜೆ 7.30 ರ ವೇಳೆಗೆ ಸೆಕುಂದರಾಬಾದ್‌ ನ ಸ್ವಪ್ನಲೊಕ್‌ ಕಟ್ಟಡದ 5 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ರಮೇಣ ಬೆಂಕಿ 6 ಮತ್ತು 7 ನೇ ಮಳಿಗೆಗಳಿಗೂ ಆವರಿಸಿದೆ.

ದಟ್ಟವಾದ ಹೊಗೆ ಮತ್ತು ಬೆಂಕಿಯಿಂದಾಗಿ ಹೊರ ಬರಲಾಗದೆ 13 ಮಂದಿ ಸಿಲುಕಿಕೊಂಡಿದ್ದು, ಅವರಲ್ಲಿ 7 ಮಂದಿಯನ್ನು ರಕ್ಷಿಸಲಾಯಿತು.

ಆದರೆ ಉಳಿದ 6 ಮಂದಿ ಹೊಗೆಯಿಂದ ಉಸಿರುಕಟ್ಟಿ ಮೃತ ಪಟ್ಟಿದ್ದಾರೆ.

ಪ್ರಮೀಳಾ, ವೆನ್ನೆಲಾ, ಶ್ರಾವಣಿ, ಪ್ರಶಾಂತ್, ತ್ರಿವೇಣಿ, ಶಿವ ಮೃತ ದುರ್ದೈವಿಗಳು.

ಎಲ್ಲರೂ ತೆಲಂಗಾಣದ ವಾರಂಗಲ್‌ ಮತ್ತು ಕಮ್ಮಂ ಜಿಲ್ಲೆಗೆ ಸೇರಿದವರಾಗಿದ್ದಾರೆ.

ಈ ಕಟ್ಟಡದಲ್ಲಿ ಬೇರೆ ಬೇರೆ ಕಂಪೆನಿಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮೃತ ಪಟ್ಟವರು ಮಾರ್ಕೆಟಿಂಗ್‌ ಕಂಪೆನಿಯೊಂದರ ಉದ್ಯೋಗಿಗಳಾಗಿರುತ್ತಾರೆ. 10 ಕ್ಕೂ ಅಧಿಕ ಆಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಹಕರಿಸಿದವು.

ವಿದ್ಯುತ್‌ ಶಾರ್ಟ್‌ ಸಕ್ಯೂಟ್‌ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ.

LATEST NEWS

ಗುಜರಾತ್ ಕರಾವಳಿ ಪ್ರದೇಶದಲ್ಲಿ ಪಾಕ್ ಪ್ರಜೆಗಳ ಬಂಧನ; ಬರೋಬ್ಬರಿ 600 ಕೋಟಿ ಮೌಲ್ಯದ ಡ್ರಗ್ಸ್ ವಶ!

Published

on

ಮಂಗಳೂರು / ಗುಜರಾತ್ : ಅರಬ್ಬಿ ಸಮುದ್ರದಲ್ಲಿ ಸಂಶಯಾಸ್ಪದವಾಗಿ ಸಂಚಾರ ಮಾಡುತ್ತಿದ್ದ ದೋಣಿಯೊಂದನ್ನು ವಶಕ್ಕೆ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳಿಗೆ ಶಾಕ್ ಆಗಿದೆ. ಯಾಕೆಂದರೆ, ಅದರಲ್ಲಿ ಬರೋಬ್ಬರಿ 600 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿತ್ತು.

ಒಟ್ಟು 86 ಕೆಜಿ ತೂಕದ ಈ ಮಾದಕ ವಸ್ತುಗಳ ಮೌಲ್ಯ 600 ಕೋಟಿ ರೂ. ಗೂ ಹೆಚ್ಚು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣ ಸಂಬಂಧ ದೋಣಿಯಲ್ಲಿದ್ದ 14 ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರಾವಳಿ ರಕ್ಷಣಾ ಪಡೆ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.


ಅತಿ ದೊಡ್ಡ ಕಾರ್ಯಾಚರಣೆ :

ಬೇಹುಗಾರಿಕಾ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದ್ದು, ಕರಾವಳಿ ರಕ್ಷಣಾ ಪಡೆ ವಶಕ್ಕೆ ಪಡೆದಿರುವ ಈ ದೋಣಿ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಹೇಳಲಾಗಿದೆ. ಈ ದೋಣಿಯಲ್ಲಿ 14 ಮಂದಿ ಪಾಕಿಸ್ತಾನ ಪ್ರಜೆಗಳಿದ್ದರು. ಇದೀಗ ಎಲ್ಲರನ್ನೂ ಭಾರತೀಯ ಕರಾವಳಿ ರಕ್ಷಣಾ ಪಡೆ ತನ್ನ ವಶಕ್ಕೆ ಪಡೆದಿದೆ.


ಈ ಕಾರ್ಯಾಚರಣೆಗೆ ಭಯೋತ್ಪಾದನಾ ನಿಗ್ರಹ ದಳ ಹಾಗೂ ಮಾದಕ ವಸ್ತು ನಿಯಂತ್ರಣ ಪಡೆ ಕೂಡಾ ನೆರವಾಗಿದ್ದು, ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಅರಬ್ಬಿ ಸಮುದ್ರದ ಈ ಪ್ರಾಂತ್ಯದಲ್ಲಿ ಪ್ರಬಲವಾಗಿರುವ ಮಾದಕ ವಸ್ತು ಕಳ್ಳಸಾಗಣೆದಾರರ ವಿರುದ್ಧ ನಡೆಯುತ್ತಿರುವ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ. ಕರಾವಳಿ ರಕ್ಷಣಾ ಪಡೆಗೆ ಮಾದಕ ವಸ್ತು ಜಾಲದ ವಿರುದ್ಧ ದೊರೆತ ದೊಡ್ಡ ಗೆಲುವು ಎಂದೇ ಹೇಳಲಾಗಿದೆ.

ಇದನ್ನೂ ಓದಿ : ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್‌ಐಟಿ ರಚನೆ!!

ಇನ್ನು ವಶಕ್ಕೆ ಪಡೆಯಲಾಗಿರುವ ಎಲ್ಲಾ 14 ಪಾಕ್ ಪ್ರಜೆಗಳನ್ನು ಗುಜರಾತ್ ರಾಜ್ಯದ ಪೋರ್‌ಬಂದರ್‌ಗೆ ಕರೆ ತರಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

Continue Reading

LATEST NEWS

ಮಂಗಳೂರಿನಲ್ಲಿ ಎ.30 ರಿಂದ ಮೇ 1ರ ವರೆಗೆ ನೀರು ಪೂರೈಕೆ ಸ್ಥಗಿತ; ಎಲ್ಲೆಲ್ಲಿ?

Published

on

ಮಂಗಳೂರು : ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಎ.30ರ ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಮಹಾ ನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಯಂತ್ರ ಸ್ಥಾವರದಂದ ಮಂಗಳೂರು ನಗರಕ್ಕೆ ಬರುವ ನೀರು ಹಾಯಿಸುವ ಕೊಳವೆ ಕಾಮಗಾರಿ ಕೆಲಸ ನಡೆಯಲಿರುವ ಕಾರಣ 24 ಗಂಟೆ ಅವಧಿಯಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ; ಶಾಸಕರು ಭಾಗಿ

ಈ ಅವಧಿಯಲ್ಲಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಬಜಾಲ್, ಜಪ್ಪಿನಮೊಗರು, ಕಣ್ಣೂರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಊರ್ವಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು ಮತ್ತು ಮರಕಡದ ಭಾಗಶಃ ಪ್ರದೇಶಗಳಿಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

Continue Reading

bengaluru

ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್‌ಐಟಿ ರಚನೆ!!

Published

on

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.  ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.

prajwal

47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್‌ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್‌ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್‌ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.  ಸದ್ಯ ಪೆನ್‌ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು  ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.

ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!

ಎಸ್‌ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:

ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್‌ಡ್ರೈವ್‌ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Continue Reading

LATEST NEWS

Trending