Connect with us

    DAKSHINA KANNADA

    ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆ ಎಸ್ ಡಿ ಪಿ ಐ ಸವಾಲು

    Published

    on

    ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎಸ್ ಡಿಪಿಐ ಅನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು  ರಿಯಾಜ್ ಕಡಂಬು ಹೇಳಿದ್ದಾರೆ.

    ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎಸ್ ಡಿಪಿಐ ಅನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ. ಇದಕ್ಕೆ ಹೇಗೆ ಉತ್ತರಿಸಬೇಕೆಂದು ಎಸ್ ಡಿ ಪಿ ಐಗೆ ತಿಳಿದಿದೆ ಎಂದು ಪಕ್ಷದ ರಾಜ್ಯ ವಕ್ತಾರ ರಿಯಾಜ್ ಕಡಂಬು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

    ಈ ಕುರಿತು ಪುತ್ತೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಫಿ ಬೆಳ್ಳಾರೆ ಚುನಾವಣಾ ರಣರಂಗದಲ್ಲಿ ಫ್ಯಾಸಿಸ್ಟ್ ಸರಕಾರದ ಧೋರಣೆಯಿಂದಾಗಿ ಜೈಲಿನಲ್ಲಿದ್ದುಕೊಂಡು ಸ್ಪರ್ಧೆ ಮಾಡಲಿದ್ದಾರೆ.

    ಆದರೆ ಬಿಜೆಪಿ ಜನರ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸ್ಪಂಧಿಸದೆ ದಿನ ಬೆಳಗಾದರೆ ಕೋಮುವಾದ ಮಾಡಿ ಧರ್ಮಗಳ ನಡುವೆ ಕಂದಕ ಉಂಟು ಮಾಡುತ್ತಿದೆ.

    ಇದರ ಜೊತೆಗೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ನಮ್ಮಿಂದ ಮಾತ್ರ ಜಾತ್ಯಾತೀತತೆ ಉಳಿಸಲು ಸಾಧ್ಯ ಎಂದು ಹೇಳಿ ರಾಹುಲ್ ಗಾಂಧಿ ಭಾಷಣ ಮಾಡುತ್ತಾರೆ.

    ಆದರೆ ಪುತ್ತೂರಿನಲ್ಲಿ ಆರ್ ಎಸ್ ಎಸ್ ನ ಹಿನ್ನಲೆಯುಳ್ಳ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

    ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸಂಘ ಪರಿವಾರದ ವ್ಯಕ್ತಿ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಿದ ಅವರು ಸತ್ಯ ಮತ್ತು ನ್ಯಾಯದ ವರವಾಗಿರುವ ಎಸ್ ಡಿ ಪಿ ಐಗೆ ಮತ ನೀಡುವಂತೆ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರ ಸಮಿತಿ ಸದಸ್ಯ ಇಬ್ರಾಹಿಂ ಹಾಜಿ ಸಾಗರ್, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮರ್ದ, ತಾಲೂಕು ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

    BELTHANGADY

    ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಎಫ್‌ಐಆರ್

    Published

    on

    ಬೆಳ್ತಂಗಡಿ: ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

    ಕಲ್ಲಿನ ಆಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧ ಎದುರು ಸೋಮವಾರ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಇಲಾಖೆಯಿಂದ ಯಾವೂದೇ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಲಾಗಿತ್ತು.

    ಈ ಸಂದರ್ಭ ಶಾಸಕ ಹರೀಶ್ ಪೂಂಜ ಹಾಗೂ ಇತರರು ಜನರನ್ನು ಗುಂಪು ಸೇರಿಸಿ ಪ್ರತಿಭಟನಾ ಸಭೆ ನಡೆಸಿರುವ ಬಗ್ಗೆ ಹಾಗೂ ಈ ಪ್ರತಿಭಟನಾ ಸಭೆಯಲ್ಲಿ ಹರೀಶ್ ಪೂಂಜ ಅವರು ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ಧ ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗಳಿಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಸಾರ್ವಜನಿಕ ನೌಕರರಾದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾರೆ.

    ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 58/2024 ಕಲಂ 143, 147, 34 , 504, 506, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ಮಳೆ ಬಂದು ತುಂಬಿ ತುಳುಕಿದ ಡ್ಯಾಂ.. ಮಂಗಳೂರಿನಲ್ಲಿ ನೀರಿನ ರೇಶನಿಂಗ್ ಸಿಸ್ಟಂ ರದ್ದು

    Published

    on

    ಮಂಗಳೂರು: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ಮಂಗಳವಾರ ನೀರಿನ ಮಟ್ಟ 5.5 ಮೀಟರ್‌ಗೆ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಮಾಡಲಾಗಿದ್ದ ನೀರಿನ ರೇಶನಿಂಗ್ ಸಿಸ್ಟಂ ರದ್ದು ಮಾಡಲು ನಿರ್ಧರಿಸಲಾಗಿದೆ.

    dam

    ನೀರು ತುಂಬಿರುವುದರಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಏರಿಕೆಯಾದ ಕಾರಣ ಬಂಟ್ವಾಳದ ಶಂಭೂರಿನಲ್ಲಿರುವ ಎಎಂಆರ್‌ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ತುಂಬೆ ಅಣೆಕಟ್ಟಿಗೆ ಸೋಮವಾರ(ಮೇ.20) ಹರಿಸಲಾಗಿದೆ. ತುಂಬೆ ಅಣೆಕಟ್ಟಿನಲ್ಲಿ ಗರಿಷ್ಠ ಎತ್ತರ 6 ಮೀಟರ್ ಆಗಿದ್ದು, ಸೋಮವಾರ 3.42 ಮೀಟರ್ ಮತ್ತು ಮಂಗಳವಾರ ಬೆಳಗ್ಗೆವರೆಗೆ 3.68 ಮೀಟರ್‌ ಮಾತ್ರ ನೀರು ಲಭ್ಯವಿತ್ತು. ಬಳಿಕ ದಿಢೀರ್‌ ಏರಿಕೆ ಕಂಡಿದ್ದು, ಸಂಜೆ ವೇಳೆಗೆ 5.5 ಮೀಟರ್‌ ನೀರು ನಿಲ್ಲಿಸಲಾಗಿತ್ತು. ಅಣೆಕಟ್ಟಿನಲ್ಲಿ ಸಾಮಾನ್ಯವಾಗಿ ಜೂನ್‌ನಲ್ಲಿ ನೀರು ತುಂಬಿದ ಬಳಿಕ ಗೇಟ್‌ ತೆರೆಯಲಾಗುತ್ತದೆ.

    ಆದರೆ ಕಳೆದ 2 ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಣೆಕಟ್ಟು ತುಂಬಿದೆ. ಕಳೆದ ವರ್ಷ ಮೇ 21ಕ್ಕೆ ನೀರಿನ ಮಟ್ಟ ಗಣನೀಯ ಇಳಿಕೆ ಕಂಡು 3.20 ಮೀಟರ್‌ ಇತ್ತು. ತುಂಬೆಯಲ್ಲಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ನೀರಿನ ರೇಶನಿಂಗ್‌ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

    Read More..; ಮೊಬೈಲ್ ಇಂಟರ್ನೆಟ್ ಬೇಗ ಖಾಲಿ ಆಗ್ತಿದ್ಯಾ…? ಈ ಟ್ರಿಕ್ಸ್ ಫಾಲೋ ಮಾಡಿ ನೋಡಿ….!!

    ಕುಡಿಯುವ ನೀರಿನ ಹಾಹಾಕಾರ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಏಪ್ರಿಲ್ 4ರಿಂದ ನೀರಿನ ರೇಶನಿಂಗ್‌ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು. ಇದರಿಂದಾಗಿ ನಗರಕ್ಕೆ ದಿನ ಬಿಟ್ಟು ದಿನ ನೀರು ಪೂರೈಕೆಯಾಗುತ್ತಿತ್ತು. 3 ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಇನ್ನೆರಡು ದಿನಗಳಲ್ಲಿ ಉಡುಪಿಯ ಸ್ವರ್ಣಾ ನದಿಯಲ್ಲಿ ಒಳ ಹರಿವು ಆರಂಭಗೊಳ್ಳುವ ನಿರೀಕ್ಷೆ ಇದೆ. ಬಳಿಕ ಇಲ್ಲೂ ರೇಶನಿಂಗ್‌ ಸ್ಥಗಿತವಾಗುವ ನಿರೀಕ್ಷೆ ಹೊಂದಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ಭಾರಿ ಮಳೆಗೆ ಧರೆಗುರುಳಿದ ಮರ

    Published

    on

    ಮಂಗಳೂರು : ಬಿರುಬಿಸಿಲಿನಿಂದ ಕಂಗಾಲಾಗಿದ್ದ ಕರಾವಳಿಗರ ಮೇಲೆ ವರುಣ ಕೃಪೆ ತೋರಿದ್ದು, ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು(ಮೇ 21) ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ.

     

    ಸಂಜೆಯಿಂದ ಶುರುವಾದ ಮಳೆಗೆ ಮಂಗಳೂರು ನಗರದ ಕರಂಗಲ್ಪಾಡಿ ಬಳಿ ಇರುವ ರಾಧಾ ಮೆಡಿಕಲ್ಸ್ ಎದುರುಗಡೆ ಭಾರಿ ಗಾತ್ರದ ಮರವೊಂದು ಧರೆಗುರುಳಿದ್ದು, ವಾಹನಗಳು ಜಖಂ ಗೊಂಡಿವೆ.

    ಘಟನೆಯಿಂದ ಸ್ವಲ್ಪ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮರದ ಕೊಂಬೆಗಳನ್ನು ಸ್ವಲ್ಪ ಮಟ್ಟಿಗೆ ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮಾಹಿತಿ ಲಭಿಸಿದೆ.

    Continue Reading

    LATEST NEWS

    Trending